Email : editor.ijarmjournals@gmail.com

ISSN : 2583-9667, Impact Factor: 6.038

Contact : +91 9315510518

Email editor.ijarmjournals@gmail.com

Contact : +91 9315510518

Article Abstract

International Journal of Advance Research in Multidisciplinary, 2024;2(3):258-261

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ

Author : ಡಾ. ಸ್ವಾಮಿ

Abstract

ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಅದರ ನಿರ್ದೇಶನಕ್ಕೆ ಅನುಗುಣವಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತದೆ. ಅಂತೆಯೇ ಈ ನಿಗಮದ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.

Keywords

ಸ್ವಯಂ ಉದ್ಯೋಗ, ಕಿರು ಸಾಲ, ಉದ್ಯಮಶೀಲತೆ, ಸಹಾಯ ಧನ